This is the title of the web page
This is the title of the web page

archivepolitics

Politics News

ಸಚಿವ ಸೋಮಣ್ಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

K2 ಪೊಲಿಟಿಕಲ್ ನ್ಯೂಸ್ : ರಾಜ್ಯ ಬಿಜೆಪಿಯಲ್ಲಿ ಸಚಿವ 'ಸೋಮಣ್ಣ' ಸಂಚಲನ! ಸಾಮಾನ್ಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರಿದ್ದ ಕಡೆ ರಾಜಕೀಯ ನಾಯಕರು...
Politics News

ಹೊಸ ಪಕ್ಷ ಘೋಷಣೆಯಾಗುತ್ತಿದ್ದಂತೆ : ರೆಡ್ಡಿ ಮಿಡ್ ನೈಟ್ ಪೊಲಿಟಿಕ್ಸ್ ..

ರಾಯಚೂರು : 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಸ್ಥಾಪನೆ ಹಿನ್ನೆಲೆಯಲ್ಲಿ ಗಣಿಧಣಿ ಗಾಲಿ ಜನಾರ್ದನ್​ ರೆಡ್ಡಿ ಅವರ ಮಿಡ್ ನೈಟ್ ಪಾಲಿಟಿಕ್ಸ್ ಆರಂಭವಾಗಿದೆ. ರಾತ್ರೋರಾತ್ರಿ ಬಿಜೆಪಿ ಮಾಜಿ...
Politics News

100 ಗಂಟೆ ಕಾಯಿರಿ ನನ್ನ ನಡೆ ಗೊತ್ತಾಗುತ್ತದೆ

ಸಿಂಧನೂರು : ಸಾಕಷ್ಟು ಸುದ್ದಿಯಲ್ಲಿರುವ ಜನಾರ್ದನ್ ರೆಡ್ಡಿ ಅವರು ನಾಳೆ ಮಸ್ಕಿಯಲ್ಲಿ ಪ್ರಮುಖರ ಸಭೆ ಮಾಡಲಿದ್ದಾರೆ. 100 ಗಂಟೆ ಕಾಯಿರಿ ನನ್ನ ಮುಂದಿನ ನಡೆಯ ಬಗ್ಗೆ ಎಲ್ಲಾ...
Politics News

ಸಂಪೂರ್ಣ ಹದೆಗೆಟ್ಟ ಗ್ರಾಮೀಣ ಕ್ಷೇತ್ರದ ರಸ್ತೆಗಳು ಹದೆಗೆಡಲು ಕಾರಣ ಹಾಲಿ ಮಾಜಿ ಶಾಸಕರು

ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...
Politics News

ಗಡಿ ವಿವಾದ ಮುಗಿದ ಅಧ್ಯಾಯ : ಬೊಮ್ಮಾಯಿ ದುರ್ಬಲ ಸಿಎಂ

K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ದುರ್ಬಲ ಮುಖ್ಯಮಂತ್ರಿ ಆಗಿರುವುದರಿಂದ ಮತ್ತೆ ಮತ್ತೆ ಈ ಗಡಿ ವಿವಾದ ಮುನ್ನೆಲೆಗೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರಗಳ ಗಡಿ ವಿವಾದ ಈಗಾಗಲೇ ಮುಗಿದ ಅಧ್ಯಾಯ. ಆದರೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆಯನ್ನು ಅಮಿತ್‌ ಶಾ ಕರೆಯುವ ಅಗತ್ಯವಿರಲಿಲ್ಲ. ರಾಜಕಾರಣಕ್ಕಾಗಿ ಮಹಾರಾಷ್ಟ್ರದವರು ಗಡಿಕ್ಯಾತೆ ತೆಗೆಯುತ್ತಿದ್ದಾರೆ. ಸದ್ಯಗಡಿ ವಿಷಯದಲ್ಲಿ ಸಮಸ್ಯೆಯೇ ಇಲ್ಲ. ನೆಲ, ಜಲ, ಭಾಷೆಯ ವಿಷಯದಲ್ಲಿ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಅಂಗವಾಗಿರುವ ಬೆಳಗಾವಿಯ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು....
Politics News

ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ : ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
Politics News

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು..AICC ಅಧ್ಯಕ್ಷರು ಹೇಳಿದ್ದೇನು….

K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...
Politics News

2023 ಚುನಾವಣೆ : ಕಾಂಗ್ರೆಸ್ ಲಿಸ್ಟ್ ಫೈನಲ್, ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳ ಲಿಸ್ಟ್

K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ಹಿಮಾಚಲ್ ಪ್ರದೇಶ ಚುನಾವಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ರಂಗೇರಿದೆ. ಯಾವ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು ಎಂದು ಮೂರು ಪಕ್ಷಗಳು ಪ್ರಚಾರ ಮಾಡುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೊರತುಪಡಿಸಿದರೆ ಉಳಿದ ಎಲ್ಲರಿಗೂ ಟಿಕೆಟ್ ಫಿಕ್ಸ್ ಆದಂತಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಕಾಂಕ್ಷೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳ ಮೇಲೆ ಇದೀಗ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಎಂದು ನೋಡೋಣ. ಬೆಂಗಳೂರು ನಗರ ಕ್ಷೇತ್ರ ಟಿಕೆಟ್..? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- ಕೆ.ಜೆ.ಜಾರ್ಜ್ ಬಿಟಿಎಂ...
Politics News

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಪ್ರಸ್ತುತ ಮತ ಎಣಿಕೆ ವಿವರ

K2 ಪೊಲಿಟಿಕಲ್ ನ್ಯೂಸ್ : ಬಹಳಷ್ಟು ಕಾತರ ಮೂಡಿಸಿದ ಗುಜರಾತ್ ಮತ್ತು ಉತ್ತರ ಪ್ರದೇಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಯಾವ ಪಕ್ಷ ಮುಂದೆ ಇದೆ. ಪ್ರಸ್ತುತ ಮತ ಎಣಿಕೆ ವಿವರ. ಗುಜರಾತ್ ರಾಜ್ಯದ ಪ್ರಸ್ತುತ ಮತ ಎಣಿಕೆ ವಿವರ ಹಿಮಾಚಲ ಪ್ರದೇಶದ ವಿವರ...
Politics News

ಕಾಂಗ್ರೆಸ್ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಭಾಜಪದ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ರಾಜ್ಯ ಹಿಂದುಳಿದಿದೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು. *ವಿಜಯದ ರಥ ಯಾತ್ರೆ* ನಾಳೆ ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ...
1 26 27 28 29
Page 28 of 29