This is the title of the web page
This is the title of the web page

archive#renuka

Crime News

ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ..

K2 ಕ್ರೈಂ ನ್ಯೂಸ್ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಲವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣ ಜನಕ ಘಟನೆ ಎಂದು ನಡೆದಿದೆ. ಹೌದು ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತಪಟ್ಟಿದ್ದಾರೆ. ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ....