This is the title of the web page
This is the title of the web page

archive#Shasidhara Kurera

Local News

ಮತದಾರರ ಪಟ್ಟಿಗೆ ಪ್ರತಿಯೊಬ್ಬರು ಹೆಸರನ್ನು ಸೇರ್ಪಡೆ ಮಾಡಿಕೊಳ್ಳಿ: ಶಶಿಧರ ಕುರೇರ

ರಾಯಚೂರು : ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಮತದಾನದ ಹಕ್ಕನು ಪಡೆಯಬೇಕು ಹಾಗೂ ಸುತ್ತಮುತ್ತಲಿನ ಜನರಿಗೂ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕರೇರ ಅವರು ಹೇಳಿದರು. ಅವರು ಡಿ.01 ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿರುವವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಬೇಕು ಹಾಗೂ ಈಗಾಗಲೇ ಬಿಡುಗಡೆಯಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಹೆಸರು ಇಲ್ಲದೇ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ಜನರಲ್ಲಿ...