ರಾಯಚೂರು : ಚುನಾವಣಾ ಇತಿಹಾಸದಲ್ಲಿ ನೋಡಿದಾಗ ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಆಗಿತ್ತು. ಆದರೆ ಕಳೆದ ಎರಡೂ ಅವಧಿಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಪ್ರಸಕ್ತ...
ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....
ರಾಯಚೂರು : ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ ಒದಗಿಸುವ ಪ್ರಾಮಾಣಿಕ ಪ್ರಯತ್ನದೊಂದಿಗೆ ರೈತರ ನಿಗದಿತ ಬೆಲೆ ಮಾರಾಟ ಮಾಡುವಂತಹ ಪ್ರಯತ್ನ ಮಾಡುತ್ತೇನೆ ಎಂದು ನಗರ ಶಾಸಕಾಂಗಕ್ಕೆ ಶಿವರಾಜ್ ಪಾಟೀಲ್ ಹೇಳಿದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ನೇರವಾಗಿ ತಮ್ಮ ಬೆಳೆಗಳನ್ನು ಮಾರಾಟ ಮಾಡುವ ಅವಕಾಶ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಲು ಅನೇಕ ಅಡೆತಡೆಗಳು ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸಿ ಮಾರುಕಟ್ಟೆ ಸ್ಥಾಪನೆ ಮಾಡಲಾಯಿತು ಎಂದರು. ಇದು ರೈತರ ಉತ್ಪನ್ನ ಮಾರುಕಟ್ಟೆ ರೈತರಿಗೆ ಸೀಮಿತವಾಗಬೇಕು. ರೈತರ ಬೆಳೆದ ಉತ್ಪನ್ನಗಳನ್ನು ಸೂಕ್ತ ಬೆಲೆಗೆ ಖರೀದಿ ವ್ಯಾಪಾರಸ್ಥರು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದರು.ರೈತರ ಬೆಲೆಗಳನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ರೈತರಿಗೆ ಮತ್ತು...