K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ.
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 90 ದಿನ ಕಾಲಾವಕಾಶ ಕೋರಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್ ದಂಡದ ರುಚಿ ತೋರಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸರ್ಕಾರದ ಪರ ವಕೀಲರು ಮತ್ತೆ 12 ವಾರ ಕಾಲಾವಕಾಶ ಕೇಳಿದದರು. ಅದಕ್ಕೆ ಸಿಟ್ಟಾದ ಸಿಜೆ, ಅರ್ಜಿ ಸಲ್ಲಿಕೆಯಾಗಿ ಒಂದು ವರ್ಷ ಕಳೆದಿದೆ, ಈವರೆಯೂ ಮೂರನೇ ಬಾರಿ ಕಾಲಾವಕಾಶ ಕೋರಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನ ಆದೇಶಗಳನ್ನು ಪಾಲಿಸಬೇಕೆಂಬ ಉದ್ದೇಶವಿಲ್ಲವೇ? ಎಂದು ನ್ಯಾಯಪೀಠ ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು.
![]() |
![]() |
![]() |
![]() |
![]() |
[ays_poll id=3]