K2kannadanews.in
BJP protest ರಾಯಚೂರು : ಸಂತೋಷ ನಗರದ ಸಿಎ ಸೈಟ್ ನಲ್ಲಿನ ದೇವಸ್ಥಾನ ಜಿಲ್ಲಾಡಳಿತ ತೆರವು ವಿರೋ ಧಿಸಿ ಜಿಲ್ಲಾ ಬಿಜೆಪಿ ಪಕ್ಷ ಇಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನ ಬಳಿ ರಸ್ತೆತಡೆ ಪ್ರತಿಭಟನೆ ನಡೆಸಿತು.
ಶಾಸಕರು ಹಾಗೂ ಜಿಲ್ಲಾಧ್ಯಕ್ಷ ರಾದ ಡಾ. ಶಿವರಾಜ್ ಪಾಟೀಲ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಪೋಲಿಸರು ಪ್ರತಿಭಟನಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ದೇವಸ್ಥಾನ ತೆರವು ವಿರೋಧಿ ಸಿದ ಪ್ರತಿಭಟನೆ ನಡೆಸಿ, ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಬೇಕು. ಶಾಲೆಯನ್ನು ಬೇರೆಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಶಾಸಕ ಶಿವರಾಜ ಪಾಟೀಲ್ ಮಾತನಾಡಿ, ಸಂತೋಷ ನಗರದಲ್ಲಿರುವ ಶಾಲೆಗಾಗಿ ಮೀಸಲಿಟ್ಟ ಜಾಗ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು. ಈ ತೆರವಿನ ಹಿಂದೆ ಯಾರು ಇದ್ದಾರೆ ಎಂದು ಬಹಿರಂಗ ಪಡಿಸಬೇಕು ಎಂದರು.
ಸರ್ಕಾರ ಸಮಾಜದ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದು, ತುಷ್ಟಿಕರಣ ರಾಜಕಾರಣ ಮಾಡುತಿದ್ದಾರೆ ಎಂದು ಆರೋಪಿಸಲಾಯಿತು. ಎನ್ ಶಂಕ್ರಪ್ಪ ಮಾತನಾಡಿ, ಹಿಂದೂ ದೇವತೆಗಳಿಗೆ ಅವಮಾನ ಮಾಡಿದ್ದು ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕು ಎಂದರು. ಸಂತೋಷ ನಗರದಲ್ಲಿ ದೇವಸ್ಥಾನ ತೆರವುಗೊಳಿಸಲು ಬಂದೋಬಸ್ತ್ ಮಾಡಿ ತೆರವು ಮಾಡಿದ್ದಾರೆ, ಜಿಲ್ಲೆಯಲ್ಲಿ ಸಾಕಷ್ಟು ಒತ್ತುವರಿ ಮಾಡಲಾಗಿದೆ, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು, ಜಿಲ್ಲಾಡಳಿತ, ಕೋಟೆ ಕೊತ್ತಲಗಳು, ಒತ್ತುವರಿ ಮಾಡಲಾಗಿದೆ ಎಂದರು ದೂರಿದರು. ಕಾನೂನು ಪ್ರಕಾರ ಕೆಲಸ ಮಾಡಿ ದ್ದು, ಸಂತೋಷ ಆದರೆ ಎಲ್ಲವೂ ಸಹ ಅದೇ ರೀತಿ ಕಾನೂನು ಪಾಲನೆ ಮಾಡಬೇಕು, ಒಂದು ವಾರದಲ್ಲಿ ಜನರಿಗೆ ಜಾಗೃತಿ ಮೂಡಿಸುತ್ತೇವೆ, ನಗರದಲ್ಲಿ ಒತ್ತುವರಿ ಜಾಗ ತೆರವುಗೊಳಿಸುವ ಕೆಲಸ ಜಿಲ್ಲಾಡಳಿತ ಮಾಡಬೇಕು ಎಂದು ಆಗ್ರಹಿಸಿದರು.