ಸಿಂಧನೂರು : ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆಯಲ್ಲಿ ನಾಲ್ಕು ಜನ ಗಾಳಿಯಲ್ಲಿ ಹಾರಿದ ಭೀಕರ ದೃಶ್ಯ ಸರಿಯಾಗಿದೆ.
ಹೌದು ರಸ್ತೆ ಬದಿಯಲ್ಲಿ ಮೂರು ಮಕ್ಕಳೊಂದಿಗೆ ನಿಂತಿದ್ದ ಹನುಮಂತ ಎಂಬುವ ವ್ಯಕ್ತಿಯ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ರಭಸವಾಗಿ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರತೆಗೆ ಮಕ್ಕಳು ಸೇರಿ ಹನುಮಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ 108 ಆಂಬುಲೆನ್ಸ್ ಗೆ ಕರೆ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡುವರನ್ನು ತಕ್ಷಣಕ್ಕೆ ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದ್ದು ಘಟನೆ ನೋಡಿದರೆ ಮೈ ಜುಮ್ ಎನಿಸುತ್ತದೆ. ಇನ್ನೂ ಈ ಒಂದು ಘಟನೆಯು ನಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]