This is the title of the web page
This is the title of the web page
State News

ರಾಯಚೂರು ರಾಜ್ಯದಲ್ಲಿ ಹೆಚ್ಚಿದೆ ಮೆದುಳು ಜ್ವರದ ಭೀತಿ : ಮಕ್ಕಳೇ ಇದರ ಟಾರ್ಗೆಟ್


K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಹರಡುತ್ತಿದೆ ಮೆದುಳು ಜ್ವರ, ಜೆಇ ಮೆದುಳು ಜ್ವರ ‘ಪ್ಲೇವಿವೈರಸ್’ ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜಪಾನೀಸ್ ಎನ್ ಸೆಫಲೈಟಿಸ್ ಮೆದುಳು ಜ್ವರ ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ. ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.

ರಾಜ್ಯದ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಈ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು. ನಾವೀಗ ಮೆದುಳು ಜ್ವರದ ವಿರುದ್ಧ ಯುದ್ಧ ಸಾರಬೇಕಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ತಿಳಿಸಿದರು.


[ays_poll id=3]