![]() |
![]() |
![]() |
![]() |
![]() |
ಸಿಂಧನೂರು: ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಹಿನ್ನೆಲೆ ಸಿದ್ಧಪಡಿಸಲಾಗಿದ್ದ ಬೃಹತ್ ವೇದಿಕೆಯು ವರುಣಾರ್ಭಟಕ್ಕೆ ನೆಲಸಮವಾಗಿದೆ.
ಹೌದು ಸಿಂಧನೂರು ನಗರದ ಹೊಸಹಳ್ಳಿ ಕ್ಯಾಂಪ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೇ2ರಂದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಸ್ಥಳ ನಿಗದಿ ಮಾಡಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು. ಬಹುತೇಕ ಪೂರ್ಣಗೊಂಡಿದ್ದ ವೇದಿಕೆ ವರುಣನ ಆರ್ಭಟಕ್ಕೆ ನೆಲಸಮವಾಗಿದೆ. ಭಾರಿ ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆಯಲ್ಲಿ ಸಿದ್ಧಗೊಂಡಿದ್ದ ವೇದಿಕೆ ಸಂಪೂರ್ಣವಾಗಿ ನೆಲಸಮವಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಒಂದಷ್ಟು ಆತಂಕ ಹುಟ್ಟಿಸಿದೆ.
ಇನ್ನು ಸಮಯ ಕಡಿಮೆ ಇರುವ ಹಿನ್ನೆಲೆಯಲ್ಲಿ ಭರದಿಂದ ವೇದಿಕೆ ಸಿದ್ಧಮಾಡುವ ಕಾರ್ಯ ಮಾಡಲಾಗುತ್ತಿದ್ದು ಇಂದು ಕೂಡ ಬಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರು ಕೊಂಚ ಆತಂಕಕ್ಕೆ ಒಳಗಾಗಿದ್ದಾರೆ.
![]() |
![]() |
![]() |
![]() |
![]() |
[ays_poll id=3]