
K2 ಪೊಲಿಟಿಕಲ್ ನ್ಯೂಸ್ : ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಗೆ ಹೋಗ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಕಂಡಿದೆ. ಕಾಂಗ್ರೆಸ್ ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ. ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಹಜವಾಗಿ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಕಾರ್ಯಕರ್ತರು ನಮ್ಮ ಪರವಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕೆಲವರು ಶಾಸಕರಾಗಬೇಕು ಅಂತ ಪಕ್ಷ ಬಿಡುತ್ತಾರೆ. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.
ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ನಾಳೆ ಶಿಗ್ಗಾಂವಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.
![]() |
![]() |
![]() |
![]() |
![]() |
[ays_poll id=3]