This is the title of the web page
This is the title of the web page
Politics News

ಬಿ ಆರ್ ಪಾಟೀಲ್ ಸಹಿಇರುವ ಪತ್ರ ಬಿಜೆಪಿಯವರ ಕೃತ್ಯ ಬಿ ಆರ್ ಪಾಟೀಲ್ ಬರೆದ ಪತ್ರದಲ್ಲಿ ಏನಿದೆ ಗೊತ್ತಾ..?


ಸಿಂಧನೂರು : ಶಾಸಕ ಬಿ ಆರ್ ಪಾಟೀಲ್ ಅವರ ಸಹಿ ಇರುವ ಪತ್ರ ಒಂದು ಫೇಕ್ ಪತ್ರವಾಗಿದೆ. ಇದು ಭಾರತೀಯ ಜನತಾ ಪಕ್ಷದವರ ಕುತಂತ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕ ಜಗದೀಶ್ ಶೆಟ್ಟರ್ ಸಿಂಧನೂರಿನಲ್ಲಿ ಪತ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮ ನಿಮಿತ್ಯ ಸಿಂಧನೂರ್ಗೆ ಆಗಮಿಸಿದ ವೇಳೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು ಈಗಾಗಲೇ ಈ ಒಂದು ಪತ್ರದ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ ಇದೆ 22ರಂದು ಶಾಸಕರ ಸಭೆಯನ್ನು ಕೂಡ ಕರೆದಿದ್ದು ಈ ಒಂದು ಪತ್ರದ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಬಿ ಆರ್ ಪಾಟೀಲ್ ಬರೆದಿದ್ದಾರೆ ಎನ್ನುವ ಪತ್ರದಲ್ಲಿ ಏನಿದೆ : ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದು ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ರಚನೆಯಾಗಿರುವ ಸಚಿವರ ವಿರುದ್ದ ಸ್ವಪಕ್ಷೀಯ ಹಿರಿಯ ಶಾಸಕರೇ ಮಾಡಿರುವ ಆರೋಪ.

ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆ ಕುರಿತು 30 ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಹಿರಿಯ ಶಾಸಕರಾದ ಇವರೆಲ್ಲ ಬರೆದಿರುವ ಪತ್ರದಲ್ಲಿ ಬಹುತೇಕ ಸಚಿವರ ಮೇಲೆ ಆರೋಪಗಳು ಕೇಳಿ ಬಂದಿವೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧವೂ ಆರೋಪ ಕೇಳಿ ಬಂದಿದೆ. ಹಾಸನ, ಮಂಡ್ಯ, ಚಾಮರಾಜ ನಗರ ಜಿಲ್ಲೆಗಳ ಉಸ್ತುವಾರಿ ಸಚಿವರ ವಿರುದ್ಧವೂ ದೂರು ಸಲ್ಲಿಸಲಾಗಿದೆ.


[ays_poll id=3]