This is the title of the web page
This is the title of the web page
Local News

ನೃತ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಅಧಿಕಾರಿ


ಸಿಂಧನೂರು : ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪಥಸಂಚಲನದ ನಂತರ ನೃತ್ಯ ಮಾಡುತ್ತಿದ್ದ ವೇಳೆ ಸಾರ್ವಜನಿಕ ಆಸ್ಪತ್ರೆ ಅಧಿಕಾರಿ ಒಬ್ಬರು ಕುಸಿದು ಬಿದ್ದು ಮೃತಪಟ್ಟ ನಡೆದಿದೆ.

ಹೌದು 74ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಪಥಸಂಚಲನ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಅಧಿಕಾರಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು, ಈ ವೇಳೆ ನೃತ್ಯ ಮಾಡುತ್ತಿದ್ದ ವೇಳೆಯಲ್ಲಿ ಸರ್ಕಾರಿ ಆಸ್ಪತ್ರೆ ಆರ್ಟ್ ART ಅಧಿಕಾರಿ ಮಹಾಂತೇಶ್ ಪೂಜಾರ್ ಎಂಬುವವರು ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.


[ays_poll id=3]