This is the title of the web page
This is the title of the web page
Local News

ಬಿಜೆಪಿ ಸರ್ಕಾರಕ್ಕೆ ಹೊಲೆ ಮಾದಿಗರ ಮತಗಳು ಕಂಟಕವಾಗಲಿವೆ


ರಾಯಚೂರು : ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಬಿಜೆಪಿ ಸರ್ಕಾರಕ್ಕೆ ಹೊಲೆ ಮಾದಿಗರ ಮತಗಳು ಕಂಟಕವಾಗಲೀವೆ.ಇದಕ್ಕೆ ಅವಕಾಶ ಮಾಡಿಕೊಡದೇ ನ್ಯಾಯ ಒದಗಿಸಿ ಕೊಡಬೇಕೆಂದು ಎಂದು ದಲಿತ ಸಂರಕ್ಷ ಸಮಿತಿಯ ಅಧ್ಯಕ್ಷ ಎಲ್.ವಿ ಸುರೇಶ್ ಹೇಳಿದರು.

ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒಪ್ಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹವನ್ನು ಮುಂದುವರೆದಿದೆ. ಜನವರಿ 26ರಂದು ಸಂವಿಧಾನ ಸಮರ್ಪಣಾ ದಿನಾಚರಣೆ ಸಮಾವೇಶವನ್ನು ಧರಣಿಯಲ್ಲಿ ಹಮ್ಮಿಕೊಳ್ಳಲಾಗಿದೆ ಈ ಸಮಾವೇಶಕ್ಕೆ 25 ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು.

ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದಾಶಿವ ಆಯೋಗ ವರದಿಯನ್ನು ಶಿಫಾರಸ್ಸು ಮಾಡೇ ಮಾಡುತ್ತೇವೆ ಎಂದು ಸಾಕಷ್ಟು ಬಾರಿ ಸಮುದಾಯದ ಮುಖಂಡರಗಳಲ್ಲಿ ಹೇಳಿದ್ದರು ಆದರೆ ಅವರು ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವಲ್ಲಿ ವಿಫಲರಾಗಿದ್ದಾರೆ. ಈಗಿನ ಬಿಜೆಪಿ ಸರ್ಕಾರ ಕೇಂದ್ರಕ್ಕೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಎಚ್ಚರಿಸಿದರು.


[ays_poll id=3]