
K2 ನ್ಯೂಸ್ ಡೆಸ್ಕ್ : ಯಜಮಾನಿ ಅಥವಾ ಕುಟುಂಬದ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿರುತ್ತಾರೆ ಎಂದು ಸರಕಾರ ಮಾರ್ಗಸೂಚಿ ಹೊರಡಿಸಿದೆ.
ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಈ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಪಡೆಯಬಹುದಾಗಿದೆ.
ಬೇಕಾದ ದಾಖಲೆಗಳು : ಪಡಿತರ ಚೀಟಿಯ ಸಂಖ್ಯೆ, ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್‌ಬುಕ್/ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತೀ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು.
![]() |
![]() |
![]() |
![]() |
![]() |
[ays_poll id=3]