
ರಾಯಚೂರು : ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲಿಸ್ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ರಕ್ತ ನಿಧಿ ಕೇಂದ್ರಗಳು, ಲಯನ್ಸ್ ಕ್ಲಬ್, ಎಸ್‌ಕೆಇ ಪ್ಯಾರಾ ಮೆಡಿಕಲ್ ಕಾಲೇಜು, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಸೇರಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡಲಾಯಿತು. ರಾಯಚೂರು ಜಿಲ್ಲೆಯಾದ್ಯಂತ 22 ಲಕ್ಷ ಜನಸಂಖ್ಯೆ ಹೊಂದಿದ್ದು ಇಲ್ಲಿ ಕೇವಲ ಒಂದು ಪರ್ಸೆಂಟ್ ದಾನಿಗಳು ಸಿಗುತ್ತಿದ್ದಾರೆ.
ಹಾಗಾಗಿ ಮಹನೀಯರ ದಿನಾಚರಣೆಯಂದು ರಕ್ತದಾನದಂತ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ರಕ್ತ ಸಂಗ್ರಹ ಮಾಡಬಹುದಾಗಿದೆ. ಯುವಕ ಯುವತಿಯರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರಸಭೆ, ಡಿಡಿಪಿಐ ಕಚೇರಿ, ಜೈಲ್ ರಸ್ತೆ, ಮಹಿಳಾ ಸಮಾಜ, ಜಾಕೀರ್ ಹುಸೇನ್ ವೃತ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವರೆಗೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು, SKEs ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರುನಡೆಯಿತು.
![]() |
![]() |
![]() |
![]() |
![]() |
[ays_poll id=3]