
K2 ನ್ಯೂಸ್ ಡೆಸ್ಕ್ : ಬಡ ಜನರಿಗಾಗಿ ಸರ್ಕಾರ ಉಚಿತ ಪಡಿತರನ್ನು ನೀಡುತ್ತಿದೆ. ಆದರೆ ಕೆಲವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದಾರೆ. ಸರ್ಕಾರದ ಸಕಲ ಲಾಭಕ್ಕಾಗಿ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗಳು ಹೆಚ್ಚುತ್ತಿವೆ. ಇಂತಹವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅನೇಕ ಹೊಸ ರೂಲ್ಸ್ ಗಳನ್ನು ತಂದಿದೆ.
ಇನ್ನು ರಾಜದಲ್ಲಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಅನರ್ಹರಿಗೆ ಸಿಗಬಾರದೆನ್ನುವ ಕಾರಣಕ್ಕೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನುಮುಂದೆ ಇಂತವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಇದೀಗ ಬಿಪಿಎಲ್ ಕಾರ್ಡ್ ಹೊಂದಿರುವ ಅನೇಕ ಕುಟುಂಬಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸ್ವಂತ ಕಾರ್ ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗುವ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಘೋಷಿಸಿದ್ದಾರೆ.
ಹೊಸ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಜೊತೆಗೆ ಇರುವ ಬಿಪಿಎಲ್ ಕಾರ್ಡನ್ನು ರದ್ದು ಮಾಡುವ ಕುರಿತಾಗಿ ತಿಳಿಸಲಾಗಿದೆ. ಇನ್ನು ಯಲ್ಲೊ ಬೋರ್ಡ್ ಕಾರನ್ನು ಹೊಂದಿರುವವರ ಕಾರ್ಡನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರನ್ನು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು ಮಾಹಿತಿ ನೀಡಲಾಗಿದೆ.
![]() |
![]() |
![]() |
![]() |
![]() |
[ays_poll id=3]