ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಪೊಲೀಸ್ ರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಇಬ್ಬರು ಮೃತ ದೇಹಗಳನ್ನು ಮಸ್ಕಿ ಆಸ್ಪತ್ರೆ ಹಾಗೂ ಓರ್ವ ವ್ಯಕ್ತಿ ಮೃತದೇಹವನ್ನು ಸಿಂಧನೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![]() |
![]() |
![]() |
![]() |
![]() |
[ays_poll id=3]