
ರಾಯಚೂರು : ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಂತಿಮವಾಗಿ ಬಿವಿ ನಾಯಕ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು ಇಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಗಂಗಾಧರ ನಾಯಕ ಹಾಗೂ ಮುಖಂಡ ಬಿ.ಮಾನಪ್ಪ ನಾಯಕ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ಮಂಗಳವಾರವಷ್ಟೇ ಬಿಜೆಪಿ ಸೇರಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಅವರಿಗೆ ಟಿಕೆಟ್ ನೀಡಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಬಿ.ವಿ.ನಾಯಕ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು, ಮಾನ್ವಿಯಿಂದ ಟಿಕೆಟ್ ಬಯಸಿದ್ದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಹುಬ್ಬಳ್ಳಿಗೆ ತೆರಳಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಾಜಿ ಸಂಸದರೂ ಆದ ಬಿ.ವಿ. ನಾಯಕ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷಕ್ಕೆ ಸ್ವಾಗತಿಸಿದ್ದರು. ಈಗ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಕೊನೆಯ ದಿನವಾದ ಇಂದು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ, ಬಿವಿ ನಾಯಕ್.
![]() |
![]() |
![]() |
![]() |
![]() |
[ays_poll id=3]