
K2 ನ್ಯೂಸ್ ಡೆಸ್ಕ್ : ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದ್ದು, ಒಟ್ಟು ಪರಿಹಾರ ಮೊತ್ತವು ರೂ. 223 ಕೋಟಿಯೆಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಳ್ಳಲಾಯಿತು. ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೇಲಿನ ಮೂರು ಜಿಲ್ಲೆಗಳಲ್ಲಿ ಉಲ್ಬಣ ಗೊಂಡು ಬೆಳೆಹಾನಿಯಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿರುತ್ತದೆ. ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದ ಸರ್ಕಾರವು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.
![]() |
![]() |
![]() |
![]() |
![]() |
[ays_poll id=3]