K2kannadanews.in
Crime News ಲಿಂಗಸೂಗೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಿಲೋಮೀಟರ್ ಕಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡಿದ ಪರಿಸ್ಥಿತಿ ಗೊಲಪಲ್ಲಿ ಗ್ರಾಮದ ಬಳಿ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗೋಲಪಲ್ಲಿ ಗ್ರಾಮದ ಬಳಿ ಈ ಒಂದು ಅಪಘಾತ ಜರುಗಿದೆ. ಜೇವರ್ಗಿ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150 ಎ ಕಿರಿದಾದ ರಸ್ತೆ ಇರುವುದರಿಂದ ಈ ಒಂದು ಸ್ಥಳದಲ್ಲಿ ಅಪಘಾತ ಜರುಗಿದೆ. ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ನಡು ರಸ್ತೆಯಲ್ಲಿ 2 ಲಾರಿ ನಿಂತಿದ್ದ ಕಾರಣ ಎರಡು ಬದಿಯ ವಾಹನಗಳು ಸಂಚರಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಘಟನೆಯಾಗುತ್ತಿದ್ದಂತೆ ಎರಡು ಬದಿಯಲ್ಲಿ ಸುಮಾರು 2 km ನಷ್ಟು ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಟ್ಟಿ ಪೊಲೀಸರು ಮಾಹಿತಿ ಪಡೆದು ಲಾರಿಗಳನ್ನು ತೆರವು ಮಾಡುವಲ್ಲಿ ಹರಸಾಹಸ ಪಡಬೇಕಾಯಿತು. ಘಟನೆಗೆ ಸಂಬಂಧಿಸಿದಂತೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.