
ರಾಯಚೂರು : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಗೇಟ್ ಮತ್ತು ಕಾಂಪೌಂಡ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಸ್ಥಳೀಯರು ಶಿಕ್ಷಕರ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ರಾಯಚೂರು ನಗರದ ಮೈಲಾರಿ ನಗರದಲ್ಲಿ ಇರುವಂತಹ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿ ಸುರೇಶನ ಮೇಲೆ ಬಿದ್ದಿದೆ. ವಿದ್ಯಾರ್ಥಿ ತಲೆ ಹೊಟ್ಟೆಗೆ ಗಾಯಗಳಾಗಿದ್ದು ಕಾಲು ಮುರಿದಿದ್ದು, ಕೂಡಲೆ ವಿದ್ಯಾರ್ಥಿಯನ್ನು ಬಾಲಂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವೇಳೆ ಶಾಲೆಯ ಶಿಕ್ಷಕರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಈಗಾಗಲೇ ಕಂಪೌಂಡ ಶಿಥಿಲಾವಸ್ಥೆಗೆ ತಲುಪಿರುವ ಬಗ್ಗೆ ಶಿಕ್ಷಕರ ಗಮನಕ್ಕೆ ತರಲಾಗಿತ್ತು. ಎಸ್ಡಿಎಂಸಿ ಅಧ್ಯಕ್ಷರ ಗಮನಕ್ಕೂ ತರಲಾಗಿತ್ತು, ಆದರೂ ಕೂಡ ಯಾರು ಕ್ರಮ ಕೈಗೊಂಡಿಲ್ಲ ಅದುವೇ ಇಂದಿನ ಘಟನೆಗೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
![]() |
![]() |
![]() |
![]() |
![]() |
[ays_poll id=3]