
K2 ನ್ಯೂಸ್ ಡೆಸ್ಕ್ : ಬೆಂಗಳೂರು-ಕಲಬುರಗಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಸಿಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭರವಸೆ ನೀಡಿದ್ದಾರೆ.
ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‍ರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಸಚಿವರು ಶೀಘ್ರಸದಲ್ಲೇ ಸೇವೆ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು-ಕಲಬುರಗಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವುದರ ಜೊತೆಗೆ, ಮುಂಬೈ-ಸೋಲಾಪುರ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ಅನ್ನು ಕಲಬುರಗಿವರೆಗೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ ಉಮೇಶ್ ಜಾಧವ್.
![]() |
![]() |
![]() |
![]() |
![]() |
[ays_poll id=3]