
ರಾಯಚೂರು : ಭಾರತೀಯ ಜನತಾ ಪಾರ್ಟಿ ವತಿಯಿಂದ ಜನವರಿ 21 ರಿಂದ 29 ರವರೆಗೆ ವಿಜಯ ಸಂಕಲ್ಪ ಅಭಿಯಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪಕ್ಷದ ಉಪಾಧ್ಯಕ್ಷ ಕೆ.ಎಂ.ಪಾಟೀಲ್ ಹೇಳಿದರು.
ವಿಜಯಪುರದ ಸಿಂದಗಿಯಲ್ಲಿ ಜನವರಿ 21 ರಂದು ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ದ ಅವರು ಅಭಿಯಾನವನ್ನು ಉದ್ಘಾಟನೆಯನ್ನು ಮಾಡಲಿದ್ದಾರೆ. ಈ ಅಭಿಯಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಲಿದ್ದಾರೆ ಎಂದ ಅವರು, ಎರಡು ಕೋಟಿ ಮತದಾರರನ್ನು ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ಕಾರ್ಯಕರ್ತರನ್ನು ತಲುಪುತ್ತಾರೆ. ವಿಭಾಗಗಳಲ್ಲಿ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ 312 ಮಂಡಲಗಳಲ್ಲಿ ಕಾರ್ಯಕರ್ತರು ಬಿಜೆಪಿ ಸಾಗರಿಯನ್ನು ಮನೆಮನೆಗೆ ತಲುಪಿಸಲಿದ್ದಾರೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುತ್ತದೆ. 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ ಅವರ ಮನೆ ಮನೆಗೆ ತರಲಿ ಕರ ಪತ್ರ ಹಂಚಲಿದ್ದೇವೆ. ಗೋಡೆಗಳ ಮೇಲೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ಈ ಅಭಿಯಾನದ ಭಾಗವಾಗಿದೆ. ಸದಸತ್ವ ಅಭಿಯಾನ ಸಂಪೂರ್ಣ ಆನ್ಲೈನ್ ಇರಲಿದ್ದು, ನೊಂದಣಿಯಾದ ಸದಸ್ಯರ ಸಂಖ್ಯೆಯನ್ನು ವೆಬ್ ಸೈಟ್ ನಲ್ಲಿ ನೇರವಾಗಿ ನೋಡಬಹುದು.
![]() |
![]() |
![]() |
![]() |
![]() |
[ays_poll id=3]