K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..
WhatsApp Group Join Now
Telegram Group Join Now

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ವಾಲ್ಮೀಕಿ ನಿಗಮ ಮಂಡಳಿಯಲ್ಲಿ 187 ಕೋಟಿ ಭ್ರಷ್ಟಾಚಾರ ವಿಚಾರದಲ್ಲಿ, ರಾಯಚೂರು ಗ್ರಾಮಾಂತರ ಶಾಸಕ, ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರು, ಅಧಿಕಾರ ವಹಿಸಿಕೊಂಡಾದ ಮೇಲೆ ನಿಗಮದ ಖಾತೆಯಿಂದ, ಆರ್ ಬಿ ಎಲ್ ಬ್ಯಾಂಕ್ ಸೇರಿ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆ ಆಗಿದೆ, ಹಾಗಾಗಿ ಸರ್ಕಾರ ಈ ಒಂದು ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಕು ಮತ್ತು ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಒತ್ತಾಯಿಸಿದರು..

ಪೆಟ್ರೋಲ್ (Petrol) ಮತ್ತು ಡಿಸೇಲ್(Diesel) ದರ ಏರಿಕೆ (Price hike) ಖಂಡಿಸಿ ಸಿಂಧನೂರಿನಲ್ಲಿ ಜಿಜೆಪಿ (Bjp) ಘಟಕದಿಂದ ಸಿಎಂ ಸಿದ್ದರಾಮಯ್ಯ (CM Siddaramayya) ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಸಮಧಾನ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದಾರೆ.

ಮಾನ್ವಿ ತಾಲೂಕಿನ ಹಿರೇಕೊಟ್ಟೇಕಲ್ ಹೋಬಳಿಯ ಜೀನೂರು ಗ್ರಾಮದ ರೈತರು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ, ಸೂರ್ಯಕಾಂತಿ ಬೆಳೆ ಇಳುವರಿ ಬಾರದೆ ಇರುವ ಹಿನ್ನಲೆ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಈ ಕೂಡಲೇ ರೈತರಿಗೆ ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ರೈತರು
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಸಿಂಧನೂರು ನಗರದ ಜನತೆ ಕುಡಿಯುವ ನೀರಿಗೆ ಭಯಪಡುವ ಅವಶ್ಯಕತೆ ಇಲ್ಲ ಈಗಾಗಲೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ಬಿಡಲಾಗಿದ್ದು ಕೆರೆಗಳನ್ನು ತುಂಬಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಹಸಿಲ್ದಾರ್ ಅರುಣ್ ಹೆಚ್ ದೇಸಾಯಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಭಿಸಿರುವುದರ ಹಿನ್ನೆಲೆಯಲ್ಲಿ, ಇದನ್ನ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರ ಅನಿರ್ದಿಷ್ಟ ಅವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಆದೇಶವನ್ನು ಹಿಂಪಡೆದು ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article