K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಜೂ.27 ರಂದು ನ್ಯಾಕ್ ಕಮಿಟಿ ಆಗಮಿಸಲಿದ್ದು ಹಳೆಯ ವಿದ್ಯಾ ರ್ಥಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಆಗಮಿಸಿ ಮಾಹಿತಿ ನೀಡುವಂತೆ ಕಾಲೇಜಿನ ಪ್ರಾಚಾರ್ಯ ಡಾ.ವೆಂಕಣ್ಣ ಮನವಿ ಮಾಡಿದರು. ಕಳೆದ ಬಾರಿ ಬಿ ಗ್ರೇಡ್ ಬಂದಿತ್ತು. ಈ ಬಾರಿ ಸೌಲಭ್ಯ ಮತ್ತು ಫಲಿತಾಂಶದ ಆಧಾರದ ಮೇಲೆ ಈ ಗ್ರೇಟ್ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಿಂಧನೂರು ನಗರದ ಸನ್ ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ, ಇಂದು ವಿಶ್ವ ತಂಬಾಕು ವಿರೋಧಿ ದಿನ ಆಚರಣೆ ಮಾಡಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಪಿಐ ಮಾತನಾಡಿ, ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ದುಶ್ಚಟಗಳಿಂದ ಮುಕ್ತಿಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ರಾಜ್ಯ ಸರ್ಕಾರ ಹೊಸದಾಗಿ ರೂಪಿಸಲು ಹೊರಟಿರುವ ಕೈಗಾರಿಕಾ ನೀತಿಯಲ್ಲಿ ಇಂಜಿನಿಯರಿಂಗ್ ವಿದ್ಯಾ ರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಶೇ.30 ನಿವೇಶನ ಖರೀದಿಗೆ ವಿನಾಯ್ತಿ ನೀಡುವುದು ಸೇರಿದಂತೆ ಹಲವು ಬೇಡಿ ಕೆಗಳನ್ನು ಬೆಂಗಳೂರಿನಲ್ಲಿ ಪೂರ್ವ ಸಿದ್ದತಾ ಸಭೆಯಲ್ಲಿ ಸರ್ಕಾರ ಗಮನ ಸೆಳೆದಿರುವದಾಗಿ ಕಾಟನ್ ಇಂಡ ಸ್ಟೀಜ್ ಅಸೋಸಿಯೇಷನ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿ ಹೇಳಿದರು.

ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ, ವಿಶ್ವ ತಂಬಾಕು ವಿರೋಧಿ ದಿನ, ಅಂಗವಾಗಿ ಜಾಗೃತಿ ಜಾತವನ್ನು ಏರ್ಪಡಿಸಲಾಗಿತ್ತು. ಈ ಒಂದು ಜಾಗೃತಿ ಜಾಥವನ್ನ ಸಿವಿಲ್ ಕೋರ್ಟ್ ನ್ಯಾಯಾಧೀಶರು ಹಸಿರು ನಿಷಾನೆ ಮೂಲಕ ಚಾಲನೆ ನೀಡಿದರು.

WhatsApp Group Join Now
Telegram Group Join Now
Share This Article