K2kannadanews.in
Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್ ನಲ್ಲಿ ವೀಕ್ಷಿಸಿ..
ನಗರದ (city) ಗದ್ವಾಲ್ ರಸ್ತೆಯಲ್ಲಿ (Gadwal road) ಇರುವ ಶ್ರೀ ಮಡಿವಾಳ ಮಾಚದೇವ ದೇವಸ್ಥಾನಕ್ಕೆ (Temple), ಗದ್ವಾಲ್ ಮುಖ್ಯ ರಸ್ತೆಯಿಂದ ದೇವಸ್ಥಾನದವರೆಗೆ ಇಂದು ಸಿಸಿ ರಸ್ತೆ (CC road) ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕರ ಅನುದಾನದಲ್ಲಿ (MLA grant) ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಸಮಾಜದ ಮುಖಂಡರು ಈ ಒಂದು ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ತುಂಗಭದ್ರಾ ಜಲಾಶಯದ (TB Dam)19ನೇ ಕ್ರೆಸ್ಟ್ ಗೇಟ್ (Gate) ಚೈನ್ ತುಂಡಾಗಿ ಕುಸಿಯಲು, ನೇರವಾಗಿ ರಾಜ್ಯ ಜಲಸಂಪನ್ಮೂಲ ಇಲಾಖೆ ಹೊಂದಿದ ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ (D K Shivakumar) ಜವಾಬ್ದಾರರಾಗಿದ್ದು, ನೈತಿಕ ಹೊಣೆ ಹೊತ್ತು ಅವರು ಸಚಿವ (Minister) ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಾಸ ಮಾಲಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿ ಒತ್ತಾಯಿಸಿದರು.
ನನ್ನ ಮಗಳಾದ ರೇಣುಕಾಳನ್ನು ಗಬ್ಬೂರು ಗ್ರಾಮದ ದಾಮೋದರ ವ್ಯಕ್ತಿಯೊಂದಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿ ನನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ತಂದೆ ಶಿವರಾಜ್ ಆರೋಪಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿಂಧನೂರು ತಾಲೂಕಿನ ರಾಗಲಪರ್ವಿ, ಗಾಂಧಿನಗರ ಹಾಗೂ ಮಸ್ಕಿ ತಾಲೂಕಿನ ಬಳಗಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ನವೀಕರಣ ಹೆಸರಲ್ಲಿ, ಪ್ರತಿ ಆರೋಗ್ಯ ಕೇಂದ್ರಕ್ಕೆ 20 ಲಕ್ಷದಂತೆ ಒಟ್ಟು 60 ಲಕ್ಷ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮೌನೇಶ್ ದ್ದಿದ್ದಿಗಿ ಆರೋಸಿದರು.
ರಾಯಚೂರು ಜಿಲ್ಲೆಯಲ್ಲಿ ಕನ್ನಡ ಕಡ್ಡಾಯ ಮಾಡಬೇಕು ಎಂದು ಒತ್ತಾಯಿಸಿ, ಇಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇನ್ನು ರಾಯಚೂರು ಜಿಲ್ಲಾಡಳಿತ ಮತ್ತು ನಗರಸಭೆ ಈ ಒಂದು ಕನ್ನಡ ಕಡ್ಡಾಯ ಮಾಡುವಲ್ಲಿ ವಿಫಲವಾಗಿದೆ ಎಂದು ದೂರು ಸಲ್ಲಿಸಿ, ಮುಂದಿನ ದಿನಗಳಲ್ಲಿ ಬ್ಯಾನರ್ ಬೋರ್ಡ್ ಗಳಲ್ಲಿ 60ರಷ್ಟು ಕನ್ನಡ ಇರುವಂತೆ, ನಿಯಮ ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಮೈತ್ರಿಕರ್ ಒತ್ತಾಯಿಸಿದರು.