
K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಇಂಧನಿಂದ ಕಾಂಗ್ರೆಸ್ ಸರ್ಕಾರದ ಮತ್ತೆ ಎರಡು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿವೆ. ಅದರಲ್ಲಿ ಮುಖ್ಯವಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ನೀಡುವ ವಿಚಾರವಾಗಿ ಪ್ರಸ್ತುತ ಅಕ್ಕಿ ಸಿಗದ ಕಾರಣ ಮುಂದಿನ ಮೂರು ತಿಂಗಳವರೆಗೆ ಖಾತೆಗೆ ಹಣ ಸಂದಾಯ ಮಾಡಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ ತೆಗೆದುಕೊಂಡಿದೆ ಹಾಗಾಗಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170 ಹಣ ಪಾವತಿಸಬೇಕಾಗಿದೆ.
ಮೊದಲು ಅಕ್ಕಿಯ ಬದಲಿಗೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದು, ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಹಣ ನೀಡುತ್ತೇವೆ ಎಂದರೆ ಅದನ್ನೂ ಟೀಕೆ ಮಾಡುತ್ತಾರೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಬಡವರ ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೆಲವರು ರಾಜಕೀಯ ಕಾರಣಕ್ಕಾಗಿಯೇ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ ಎಂದರು.
![]() |
![]() |
![]() |
![]() |
![]() |
[ays_poll id=3]