This is the title of the web page
This is the title of the web page
Local News

ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಆದ್ಯತೆ ನೀಡುತ್ತಿಲ್ಲ


ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ಪಕ್ಷದ ಸರ್ಕಾರಗಳು ಪ್ರಾಧಾನ್ಯತೆ ಕೊಟ್ಟಿಲ್ಲ.ಆದ್ದರಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಇಂದಿಗೂ ಕೂಡ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಸೇರಿಕೊಂಡಿವೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರದಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆರೋಪಿಸಿದರು.

ಕಲ್ಯಾಣ ಕರ್ನಾಟಕದ ಹೆಸರಿನಲ್ಲಿ ಸಾಕಷ್ಟು ಯೋಜನೆಗಳನ್ನು ಬಜೆಟ್‌ ಮೂಲಕ ಘೋಷಿಸಿದ್ದಾರೆ. ಆದರೆ ಅವು ಯಾವುದು ಕೂಡ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಘೋಷಣೆಯಾದ ಅನುದಾನಕ್ಕಿಂತ ಸಾಕಷ್ಟು ಕಡಿಮೆ ಪ್ರಮಾಣದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅದರ ಜೊತೆಗೆ ಬಿಡುಗಡೆಯಾಗುವ ಅಲ್ಪಸ್ವಲ್ಪ ಮೊತ್ತವೂ ಭ್ರಷ್ಟಾಚಾರದಲ್ಲಿ ಕರಗಿ ಹೋಗುತ್ತದೆ. ಹೀಗಿರುವಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಸಾಧ್ಯವಾಗುವುದಾದರೂ ಹೇಗೆ ? ಎಂದು ಪ್ರಶ್ನಿಸಿದರು.

ದೇಶದ ಇತಿಹಾಸದಲ್ಲಿ ಕಂಡು ಕೇಳರಿಯದ 40 ಕಮಿಷನ್ ಪಡೆಯುವ ಅತ್ಯಂತ ಭ್ರಷ್ಟ ಸರ್ಕಾರ ಸದ್ಯ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರ ಒಂದಡೆ ಭ್ರಷ್ಟಾಚಾರ,ಇನ್ನೊಂದೆಡೆ ಬಿಜೆಪಿಯ ಮೂಲ ತಂತ್ರವಾದ ಧರ್ಮ ದ್ವೇಷವನ್ನು ಬಿತ್ತುವ ಮೂಲಕ ಸಮಾಜವನ್ನು ಇಬ್ಬಾಗವಾಗಿಸುವ ಪಡ್ಯಂತ್ರದ ನಡುವೆ ಕರ್ನಾಟಕ ತತ್ತರಿಸಿ ಹೋಗಿದೆ ಎಂದು ಆರೋಪಿಸಿದರು.


[ays_poll id=3]