K2 ಕ್ರೈಂ ನ್ಯೂಸ್ : ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರು ಮುಳುಗಿ ನೀರುಪಾಲಾಗಿರುವ ಘಟನೆ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ 15 ವರ್ಷದ ಸಕ್ಕುಬಾಯಿ ಮತ್ತು ಚಾಂದನಿ ಬಾಬುರಾವ ಮೃತ ದುರ್ದೈವಿ ವಿದ್ಯಾರ್ಥಿಗಳು. ಗ್ರಾಮದ ಹೊರವಲಯದಲ್ಲಿ ಇರುವ ಕೆರೆಗೆ ಈಜಲು ಹೋಗಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.
ಬಾಲಕಿಯರು ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಅವರ ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದರು. ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಯು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ.
![]() |
![]() |
![]() |
![]() |
![]() |
[ays_poll id=3]