
K2 ಪೊಲಿಟಿಕಲ್ ನ್ಯೂಸ್ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಹರಿದಾಡುತ್ತಿತ್ತು. ಇದೀಗ ಸಿಕ್ಕಿರುವ ಮಾಹಿತಿಗಳ ಪ್ರಕಾರ ನಟ ಕಿಚ್ಚ ಸುದೀಪ್, ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 1.30ಕ್ಕೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ರಾಜ್ಯದ ಪ್ರಮುಖ ಬಿಜೆಪಿ ಮುಖಂಡರ ಸಮುಖದಲ್ಲಿ ಕಿಚ್ಚ ಸುದೀಪ್ ಬಿಜೆಪಿ ಬಾವುಟವನ್ನು ಹಿಡಿಯಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಕಿಚ್ಚ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ನಟ ಸುದೀಪ್ ಚುನಾವಣಾ ಅಖಾಡಕ್ಕೆ ಇಳಿಯುತ್ತಾರೆಯೇ? ಇಲ್ಲವೇ ಅನ್ನೋದು ಕೂಡ ತೀವ್ರ ಕುತೂಹಲ ಮೂಡಿಸಿದೆ.
![]() |
![]() |
![]() |
![]() |
![]() |
[ays_poll id=3]