This is the title of the web page
This is the title of the web page
State News

ಬಿಜೆಪಿಯಲ್ಲಿ ಯಡಿಯೂರಪ್ಪ ಲೆಕ್ಕಕ್ಕೆ ಇಲ್ಲ


K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ.

ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ‘ ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು. ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ಸರಕಾರ ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದಂತೆ ಯಡಿಯೂರಪ್ಪ ಅವರನ್ನೂ ಬಿಜೆಪಿಯವರು ಚುನಾವಣೆವರೆಗೂ ತಳ್ಳಿಕೊಂಡು ಹೋಗುತ್ತಿದ್ದಾರೆ’ ಎಂದರು.

ಈ ಹಿಂದೆ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು.ಇಡೀ ವಿಶ್ವ ಬೆಂಗಳೂರಿನ ಕಡೆ ನೋಡುತ್ತಿರುವಾಗ ರಾಜ್ಯ ಭಯೋತ್ಪಾದಕರ ಕೇಂದ್ರ ಎನ್ನುವಂತೆ ಮಾತನಾಡಿದರೆ ರಾಜ್ಯದ ಘನತೆ ಹಾಳಾಗುತ್ತದೆ. ಭಯೋತ್ಪಾದನೆಗೆ ನಮ್ಮ ಪಕ್ಷದ ನಾಯಕರು ಬಲಿಯಾಗಿದ್ದಾರೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ನಾವು ಸದಾ ಬದ್ಧರಾಗಿದ್ದೇವೆ. ನಾವು ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ.

ಕಾಂಗ್ರೆಸ್ ಭಯೋತ್ಪಾದಕರ ಪರವಾಗಿದೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಅವರು ತಮ್ಮ ಹೆಸರು ಮಾರುಕಟ್ಟೆಯಲ್ಲಿ ಓಡಬೇಕು ಎಂಬ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ನಾನು ಅವರ ಭ್ರಷ್ಟಾಚಾರ, ಅಕ್ರಮ ಮುಚ್ಚಿಹಾಕುವ ಯತ್ನ, ರಾಜ್ಯಕ್ಕೆ ಆಗುತ್ತಿರುವ ದ್ರೋಹದ ಬಗ್ಗೆ ಮಾತನಾಡಿದ್ದೇನೆ’ ಎಂದರು.


[ays_poll id=3]