
K2 ಪೊಲಿಟಿಕಲ್ ನ್ಯೂಸ್ : ಜೀವನಾಧಾರಕ್ಕಾಗಿ ವಾಣಿಜ್ಯ ಬಳಕೆಗೆ ತೆಗೆದುಕೊಳ್ಳುವ ತ್ರಿಚಕ್ರ ವಾಹನ ಅಥವಾ ಕಾರು (ಯಲ್ಲೋ ಬೋರ್ಡ್) ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದಿಲ್ಲ ತಿಳಿಸಿದರು. ಇದಲ್ಲದೇ ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಈಗ ನೀಡುತ್ತಿರುವಂತ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೆ.ಜಿ ಅಕ್ಕಿ ಸೇರಿ 10 ಕೆ.ಜಿ ಅಕ್ಕಿಯನ್ನು ವಿತರಿಸುವುದಾಗಿ ಹೇಳಿತ್ತು. ಆದ್ರೇ ಅಕ್ಕಿ ಕೊರತೆಯ ಕಾರಣ ಹೆಚ್ಚುವರಿ ಐದು ಕೆ.ಜಿ ಅಕ್ಕಿಗೆ ಬದಲಾಗಿ ಪಡಿತರದಾರರ ಖಾತೆಗೆ ಹಣವನ್ನು ಜಮಾ ಮಾಡಲಾಗಿತ್ತು.
ಇದೀಗ ಹೆಚ್ಚುವರಿ ಐದು ಕೆ.ಜಿ ಅಕ್ಕಿಯನ್ನು ಸೆಪ್ಟೆಂಬರ್ ನಿಂದಲೇ ವಿತರಿಸೋದಾಗಿ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಹೊಸದಾಗಿ BPL, APL ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ತಿಳಿಸಿದರು.
![]() |
![]() |
![]() |
![]() |
![]() |
[ays_poll id=3]