
ರಾಯಚೂರು : ಶಿಕ್ಷಣ ಇಲಾಖೆಯ ಎಡವಟ್ಟಿನಿಂದ, ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಯುವಕನೋರ್ವ ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವದುರ್ಗ ಪಟ್ಟಣದಲ್ಲಿ ನಡೆದಿದೆ.
ಹೌದು ಮೃತ ಚೆನ್ನಬಸವ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ 2022ರ ನೇಮಕಾತಿ ಪಟ್ಟಿಯಲ್ಲಿ ಹೆಸರು ಇತ್ತು. ಆದರೆ, ಕೊನೆ ಕ್ಷಣದಲ್ಲಿ ಪಟ್ಟಿಯಿಂದ ಹೆಸರು ಕೈ ತಪ್ಪಿತ್ತು. ಮತ್ತೆ ಎರಡು ಬಾರಿ ಪರೀಕ್ಷೆ ಬರೆದು ಫೇಲಾಗಿದ್ದ. ಮೊದಲ ಬಾರಿಗೆ ಶಿಕ್ಷಕನಾಗುವ ಕನಸು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು. ಜೊತೆಗೆ ಮತ್ತೊಮ್ಮೆ ಪರೀಕ್ಷೆಯಲ್ಲಿ ಫೇಲಾಗಿದ್ದ ಬೇಸರವಾಗಿತ್ತು, ಏಕಾಏಕಿಯಾಗಿ ಆಡಳಿತ ವ್ಯವಸ್ಥೆ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾರೋ ಮಾಡಿದ ತಪ್ಪಿಗೆ ವ್ಯವಸ್ಥೆ ನನಗೆ ಶಿಕ್ಷೆ ನೀಡಿದೆ. ಆಡಳಿತ ವ್ಯವಸ್ಥೆಗೆ ನನ್ನ ದಿಕ್ಕಾರವಿ ರಲಿ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದೇವದುರ್ಗ ತಾಲೂಕಿನ ಚಿಕ್ಕಬುದೂರು ಗ್ರಾಮದ ಚನ್ನಬಸವ(25) ಮೃತಪಟ್ಟ ಯುವಕ ಮೃತ ದುರ್ದೈವಿ. ಪಟ್ಟಣದ ಜಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]